ಕ್ರೈಂ ವಾರ್ತೆ

ರಿಕ್ಷಾ ಅಪಘಾತ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಪ್ರಮೋದ್ ಭೈರ ಮೃತ್ಯು

ಲಾಯಿಲ: ಇಲ್ಲಿಯ ಪುತ್ರಬೈಲು ಸಮೀಪ ಎ.9ರಂದು ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಎ.25 ರಂದು ನಡೆದಿದೆ.
ಬೆಳ್ತಂಗಡಿ ಎಪಿಎಂಸಿ ಸದಸ್ಯರಾದ ಈಶ್ವರ ಬೈರ     ರವರ ಪುತ್ರ ಪ್ರಮೋದ್ ಭೈರ ಮೃತಪಟ್ಟವರು. ಎ.9ರಂದು ಈ ಘಟನೆ ನಡೆದಿದ್ದು, ನಾಲ್ವರು ಗಾಯಗೊಂಡಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಪ್ರಮೋದ್ ಬೈರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಿಮ್ಮದೊಂದು ಉತ್ತರ