ಜಿಲ್ಲಾ ವಾರ್ತೆ

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

ಬೆಳ್ತಂಗಡಿ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಮುಂದಿನ ಆದೇಶದವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ದೇವರ ದರ್ಶನ, ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವ
ರೆಗೆ ಅವಕಾಶ ನೀಡಲಾ
ಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿ
ರುವುದಿಲ್ಲ.
ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ
ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತ್ಯಾ ಉತ್ಸವ, ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನು
ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.
ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.

ನಿಮ್ಮದೊಂದು ಉತ್ತರ