ಓಡಿಲ್ನಾಳ: ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆ ಬೆಳೆಸಿ, ಮೊಬೈಲ್ ನಲ್ಲಿ ಅಶ್ಲೀಲ ಸಂದೇಶಗಳನ್ನು ರವಾನಿಸಿದ ಆರೋಪದಡಿ ಓಡಿಲ್ನಾಳ ಗ್ರಾಮದ ದಿಲೀಪ್ ಎಂಬಾತನ್ನು ಬಂಧಿಸಿದ ಪೊಲೀಸರು, ಫೋಕ್ಸೋ ಕಾಯ್ದೆಯಡಿ ಪ್ರಕರಣದಾಖಲಿಸಿಕೊಂಡ ಘಟನೆ ಅ.25 ರಂದು ನಡೆದಿದೆ.
ಇಲ್ಲಿಯ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಈತ ಸಲುಗೆಯನ್ನು ಬೆಳೆಸಿಕೊಂಡಿದ್ದು, ಆನ್ ಲೈನ್ ಶಿಕ್ಷಣಕ್ಕೆಂದು ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು, ಆಕೆಗೆ ಅಶ್ಲೀಲ ಸಂದೇಶಗಳನ್ನು ಹಾಗೂ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಬಾಲಕಿಯ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿಲೀಪ್ ಎಂಬಾತನನ್ನು ಬಂಧಿಸಿದ ಪೊಲೀಸರು, ವಿಚಾರಣೆ ನಡೆಸಿದ್ದು, ಆತನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.