ಕ್ರೈಂ ವಾರ್ತೆ

ಕಳಿಯದಲ್ಲಿ ಪತ್ನಿಯನ್ನು ಕೊಲೆಗೈದ ಆರೋಪ ಪತಿಯ ಮೇಲಿನ ಆರೋಪ ಖುಲಾಸೆಗೊಳಿಸಿದ ನ್ಯಾಯಾಲಯ

ಕಳಿಯ: ಸುಮಾರು ಎರಡು ವರ್ಷಗಳ ಹಿಂದೆ ಕಳಿಯ ಗ್ರಾಮದ ಗೇರುಕಟ್ಟೆ ಕಜೆ ಮನೆಎಂಬಲ್ಲಿ ಪತ್ನಿಯನ್ನು ಕೊಲೆ ಮಾಡಿದ
ಆರೋಪ ಎದುರಿಸುತ್ತಿದ್ದ ಉಮರ್
ಫಾರೂಕ್ಎಂಬವರನ್ನು ಮಂಗಳೂರಿನ
ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದೋಷಮುಕಗೊಳಿಸಿ ತೀರ್ಪು ನೀಡಿದೆ.
2019 ನೇ ಡಿ.16ರಂದು ಕಳಿಯ ಗ್ರಾಮದ ಗೇರುಕಟ್ಟೆ ಕಜೆ ಮನೆ ನಿವಾಸಿ ಉಮರ್ ಫಾರೂಕ್ ಎಂಬವರು ತನ್ನ ಪತ್ನಿ ತಸ್ಮಿಯಾರವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆಧಾರ್ ಕಾರ್ಡ್ ಮಾಡಿಸಿದ ವಿಚಾರದಲ್ಲಿ ಪತಿ ಮತ್ತು ಪತ್ನಿ ನಡುವೆ ಗಲಾಟೆ ನಡೆದು ನಂತರ ಪತ್ನಿಗೆ ಹಲ್ಲೆ ನಡೆಸಿ ಕೊಲೆಗೈಯ್ಯಲಾಗಿದೆ ಎಂದು ಮೃತರ ಅಕ್ಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಉಮ್ಮರ್ ಫಾರೂಕ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 302 ಮತ್ತು 201ರಂತೆ ಶಿಕ್ಷಾರ್ಹ ಅಪರಾಧವೆಸಗಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸುಮಾರು ಎರಡು ತಿಂಗಳ ಬಳಿಕ ಆರೋಪಿಯನು ಬಂಧಿಸಿ.
ಬೆಳ್ತಂಗಡಿಯ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜ ಜೆ.ಎಂ.ಎಫ್.ಸಿ. ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದು ಗಂಭೀರ ಸ್ವರೂಪದ ಪ್ರಕರಣವಾಗಿದ್ದರಿಂದ ಈ ಪ್ರಕರಣವನ್ನು ಮಂಗಳೂರಿನ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿಯು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ನಂತರ ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ಸುಮಾರು 22 ಸಾಕ್ಷಿಗಳನ್ನು ವಿಚಾರಣೆ ನಡೆಸಿ ಪ್ರಾಸಿಕ್ಯೂಷನ್ ಈ ಕೊಲೆ ಪ್ರಕರಣವನ್ನು ಸಾಭೀತುಪಡಿಸಲು ವಿಫಲಗೊಂಡಿದೆ ಎಂದು ತೀರ್ಮಾನಿಸಿ, ಆರೋಪಿಯನ್ನು ಬಿಡುಗಡೆಗೊಳಿಸಿ ಆದೇಶಿಸಿದೆ.

 

ನಿಮ್ಮದೊಂದು ಉತ್ತರ