ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನೆತ್ತರ ಶಿವಪ್ಪ ಪೂಜಾರಿ ಮತ್ತು ಶ್ರೀಮತಿ ಹರೀಣಾಕ್ಷಿ ದಂಪತಿಗಳ ಪುತ್ರ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಯಾದ ರೋಶನ್ ಇವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವಿದ್ಯಾರ್ಥಿಯನ್ನುಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ನಾಯಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.