ಬೆಳ್ತಂಗಡಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೆಳ್ತಂಗಡಿ ಸಿ.ವಿ.ಸಿ ಹಾಲ್ ನಲ್ಲಿ ಯೋಗಾಭ್ಯಾಸ ಮಾಡಿದರು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಶಿವಕುಮಾರ್ ,ಬೆಳ್ತಂಗಡಿ ಠಾಣೆಯ ಪಿಎಸ್ ಐ ನಂದ ಕುಮಾರ್ ಹಾಗೂ ಬೆಳ್ತಂಗಡಿ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಠಾಣೆಯ ಸುಮಾರು 35 ಮಂದಿ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.