ಆಸ್ತಿ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಘಟನೆ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಮೃತ ದುರ್ದೈವಿ. ಆತನ ಸಹೋದರ ಪದ್ಮನಾಭ (49) ಕೊಲೆ ಆರೋಪಿ.
ಜಾಗದ ವಿಚಾರವಾಗಿ ಮನೆಯಲ್ಲಿ ಸಹೋದರರು ಕುಡಿದು ಆಗಿಂದಾಗ್ಗೆ ಗಲಾಟೆ ಸಂಭವಿಸುತ್ತಿದೆ. ಒಂದು ತಿಂಗಳ ಹಿಂದೆಯೂ ಇದೇ ವಿಚಾರವಾಗಿ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕಳೆದ ರಾತ್ರಿಯೂ ಇದೇ ವಿಚಾರವಾಗಿ ಜೋರಾಗಿ ಕಲಹ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ, ಇದೇ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ.