ಧರ್ಮಸ್ಥಳ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.
ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಸಚಿವೆ ಸ್ಮೃತಿ ಇರಾನಿ ಅವರು ಧಮ೯ಸ್ಥಳ ಲಕ್ಷದೀಪೋತ್ಸವ ಅಂಗವಾಗಿ ನಡೆಯುತ್ತಿರುವ ಸವ೯ಧಮ೯ ಸಮ್ಮೇಳನದ 90ನೇ ಅಧಿವೇಶನವನ್ನು ಉದ್ಘಾಟನೆ ಮಾಡಲಿದ್ದಾರೆ.