ಬೆಳ್ತಂಗಡಿ: ತಾಲೂಕಿನ ಗಡಿ ಪ್ರದೇಶವಾದ ಪಾಂಡವರಕಲ್ಲು ನಿವಾಸಿ ರಫೀಕ್ ಎಂಬವರ ಶವ ಬಂಟ್ವಾಳ ಕೋಡ್ಯಮಲೆ ಎಂಬಲ್ಲಿ ರಸ್ತೆ ಬದಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ರಫೀಕ್ ಮೃತದೇಹ ಬಂಟ್ವಾಳ ತಾಲೂಕಿನ ಕೋಡ್ಯಮಲೆ ಎಂಬಲ್ಲಿ ರಸ್ತೆ ಬದಿ ಪತ್ತೆಯಾಗಿದೆ.
ತಲೆಗೆ ಹೊಡೆದ ಗಾಯಗಳು ಕಂಡು ಬಂದಿದ್ದು ಇದೊಂದು ಕೊಲೆ ಎಂಬ ಶಂಕೆಯಿದೆ. ಮರದ ತುಂಡಿನಿಂದ ತಲೆಗೆ ಹೊಡೆದು ಸಾಯಿಸಿದಂತೆ ಕಾಣುತ್ತಿದೆ.ಜೀನ್ಸ್ ಪೇಂಟ್ ಮತ್ತು ಕೆಂಪು ಬಣ್ಣದ ಶರ್ಟ್ ಧರಿಸಿರುವ ರಫೀಕ್ ಮೃತದೇಹ ಅಂಗಾತ ಮಲಗಿದ ಸ್ಥಿತಿಯಲ್ಲಿ ಕಾಡಿನ ಬದಿ ಪತ್ತೆಯಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ಪುಂಜಾಲಕಟ್ಟೆ ಠಾಣಾ ಎಸ್ ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ.