ಬೆಳ್ತಂಗಡಿ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಅಮ್ಮಾಡಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಠಾಣೆಯಲ್ಲಿ ಪೋಕ್ಸೋಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗುತ್ತಿದೆ. ಬಂಟ್ವಾಳದ ಎಸ್ ವಿ
ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ
ಬಾಲಕಿಯನ್ನು ಪರಿಚಿತರೇ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಮಾಡಿಯಲ್ಲಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ
ನಡೆಸಿದ್ದಾರೆ.
ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸುವ
ಸಾಧ್ಯತೆ ಇದೆ. ಸದ್ಯ ಬಾಲಕಿ ಮಂಗಳೂರಿನ ಸರಕಾರಿಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ನಗರಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ
ಮುಂದುವರಿದಿದೆ.