ಕುವೆಟ್ಟು: ಗುರುವಾಯನಕೆರೆ ಪೇಟೆಯಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸುಮಾರು 42 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆ ವ್ಯಕ್ತಿ ಮೃತಪಟ್ಟ ಘಟನೆ ಮಾ.2 ರಂದು ನಡೆದಿದೆ.
ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಪೇಟೆಯಲ್ಲಿ ಫೆ.28 ರಂದು ಅಸೌಖ್ಯದಿಂದ ಬಳಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯನ್ನು ಕುವೆಟ್ಟು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೀತಾ ಸಾಲಿಯಾನ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆ ವ್ಯಕ್ತಿ ಚಿಕಿತ್ಸೆಗೆ ಸ್ಫಂದಿಸದೆ ಮಾ.2 ರಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.