ಕ್ರೈಂ ವಾರ್ತೆ

ಮಲವಂತಿಗೆ ಗ್ರಾಮದ ಬಂಗಾರ ಪಲ್ಕೆಯಲ್ಲಿ ದುಘ೯ಟನೆ: ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ  ಓರ್ವ ಸಾವು

ಬೆಳ್ತಂಗಡಿ : ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟ್ರಾಕ್ಟರ್  ‌‌ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಬಂಗಾರ್ ಪಲ್ಕೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾ‌ ಪಲ್ಕೆಯಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ಇದಕ್ಕೆ ಟಾಕ್ಟರ್ ನಲ್ಲಿ ಸಂಸೆಯಿಂದ ಡಿ.7 ರಂದು ಕಬ್ಬಿಣದ ಸರಕು ಸಾಗುತ್ತಿದ್ದಾಗ ಬಂಗಾರ್ ಪಲ್ಕೆಯ ಬಳಿಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಕ್ಕದ ಹೊಂಡಕ್ಕೆ ಬಿದ್ದಿದೆ. ಈ ವೇಳೆ ಟಾಕ್ಟರ್ ನಲ್ಲಿದ್ದ ಓರ್ವ ಚಿಕ್ಕಮಗಳೂರು ಜಿಲ್ಲೆಯ ಸಂಸೆಯ ಅಶೋಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ