ಮುಂಡಾಜೆ: ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ರವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಹಾಗೂ ತಾಯಿ ಮೇರಿ ಪುನ್ನತ್ತಾನತ್ತ್ ರವರು ಜು.15 ರಂದು ಕೋವಿಡ್ ಗೆ ಬಲಿಯಾಗಿದ್ದಾರೆ.
ಮೂಲತಃ ನೆಲ್ಯಾಡಿಯಲ್ಲಿ ವಾಸ್ತವ್ಯವಿರುವ ವರ್ಗೀಸ್ ಪುನ್ನತ್ತಾನತ್ತ್ ಹಾಗೂ ಮೇರಿ ಪುನ್ನತ್ತಾನತ್ತ್ ದಂಪತಿ ಕೆಲದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು, ಕೋವಿಡ್ ಪರೀಕ್ಷೆ ವೇಳೆ ಅವರಿಗೆ ಸೋಂಕು ದೃಢಪಟ್ಟಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಅವರ ಪೈಕಿ ಮೇರಿಯವರು ಚಿಕಿತ್ಸೆಗೆ ಸ್ಪಂದಿಸದೆ ಜು.15 ರಂದು ಮಧ್ಯಾಹ್ನ 3.00 ಗಂಟೆಯ ಸಮಯದಲ್ಲಿ ಮೃತಪಟ್ಟಿದ್ದು, ಪತಿ ವರ್ಗಿಸ್ ರವರೂ ಅದೇ ದಿನ ಸಂಜೆ 6.30 ರ ವೇಳೆ ಕೊನೆಯುಸಿರೆಳೆದಿದ್ದಾರೆ.
ಮೃತರು, ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ನೆಲ್ಯಾಡಿಯ ಸೈಂಟ್ ಅಲ್ಫೋನ್ಸಾ ಚರ್ಚ್‌ನ ದಫನ ಭೂಮಿಯಲ್ಲಿ ಕೋವಿಡ್ ನಿಯಮಾನುಸಾರ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು.