ಬೆಳ್ತಂಗಡಿ :- ಕೋವಿಡ್-19 ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಹಾಗೂ 10ನೇ ತರಗತಿಗಳ ಭೌತಿಕ ತರಗತಿಗಳ ಶಾಲಾ ಪ್ರಾರಂಭವನ್ನು ಮುಂದೂಡಲಾಗಿರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿ ದರ ಶೇ.2ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತಿ ಪ್ರೌಢಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಶಾಲಾ ಪ್ರಾರಂಭದ ದಿನಾಂಕವನ್ನು ಮುಂದೆ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ*
ಜಿಲ್ಲೆಯಲ್ಲಿ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಾರಾಂತ್ಯದ ಕಫ್ರ್ಯೂ ಜಾರಿಯಲ್ಲಿರುವುದರಿಂದ ಇದೇ ಆ.28ರಂದು ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಶಿಕ್ಷಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಅಲ್ಲದೇ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ಚಟುವಟಿಕೆ ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.