ಜಿಲ್ಲಾ ವಾರ್ತೆ

ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು : ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶ್ರೀರಾಮ ಸೇನಾ

ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.
ಆದೇಶಿಸಿದ್ದಾರೆ.
ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪ್ರವೇಶಕ್ಕೆ ಜು. 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ