ಜಿಲ್ಲಾ ವಾರ್ತೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನಾ ಸಭೆ

ಮಂಗಳೂರು :ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಮಂಗಳೂರಿಗೆ ಸೆ.2ರಂದು ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಇಂದು ಆ. 30ರಂದು ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.

ಪ್ರಧಾನಮಂತ್ರಿಗಳ ಆಗಮನದ ಸ್ಥಳ, ಭದ್ರತಾ ವಿಚಾರ ಹಾಗೂ ಅವರನ್ನು ಸ್ವಾಗತಿಸಲು ತೆರಳುವ ಪ್ರಮುಖರ‌ ಬಗ್ಗೆ ಚರ್ಚಿಸಲಾಯಿತು.ಮಂಗಳೂರು ಸಂಸದರು

ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಸಚಿವರಾದ ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗಳಾದ ಕೆ.ವಿ.ರಾಜೇಂದ್ರ, ಶಾಸಕರಾದ ಡಾ.ಭರತ್ ಶೆಟ್ಟಿ,

ವೇದವ್ಯಾಸ್ ಕಾಮತ್, ಬಿಜೆಪಿ ರಾಜ್ಯ ನಾಯಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಸೇರಿದಂತೆ ಪ್ರಮುಖ ನಾಯಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ