ಜಿಲ್ಲಾ ವಾರ್ತೆ

ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದ ಆರೋಪ: ಪುತ್ತೂರು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ಧ ಕೇಸು

ಪುತ್ತೂರು : ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ಧ ಸೆ.12ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು ಅರಣ್ಯ ವಲಯವು ಪ್ರಕರಣ ದಾಖಲಿಸಿಕೊಂಡಿದೆ.

ಪುತ್ತೂರಿನಿಂದ ಪಾಣಾಜೆಗೆ ಸೆಂಟ್ಯಾರ್ ಮೂಲಕ ಹಾದು ನಿಂತಿರುವ ಗೊಳಿ ಮರದ ರೆಂಬೆ ಕೊಂಬೆಗಳನ್ನು ಭಾನುವಾರ (ಸೆ 11 ರಂದು ) ಕಡಿದುರುಳಿಸಲಾಗಿತ್ತು. ಹೀಗಾಗಿ ಬಗ್ಗೆ ಸ್ವಯಂ ಪ್ರೇರಣೆಯಿಂದ ತನಿಖೆ ಆರಂಭಿಸಿದ ಅರಣ್ಯ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಹಣಾ ಅಧಿಕಾರಿ ಲಕ್ಷ್ಮಣ ಹಾಗೂ ನಿರ್ದೇಶಕರಾದ ರವೀಂದ್ರ ಭಂಡಾರಿ,ಚಂದ್ರ ಮತ್ತು ಪ್ರಕಾಶ್ ಎಂಬುವರ ವಿರುದ್ಧ ಅಕ್ರಮ ಮರ ಕಡಿದಿರುಳಿಸಿದ ಬಗ್ಗೆ ಅರಣ್ಯ ಇಲಾಖೆಯ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ