ಬೆಳ್ತಂಗಡಿ: ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ನೇಮಿರಾಜ್ ಅರಿಗರವರಿಂದ ಕಾರ್ಕಳ ತಾಲೂಕು ಪತ್ರಕರ್ತರಿಗೆ ಕಿಟ್ ವಿತರಣಾ ಸಮಾರಂಭ ಇತ್ತಿಚೇಗೆ ಕಾರ್ಕಳದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಕಿಟ್ ವಿತರಣೆಯನ್ನು ನೆರವೇರಿಸಿ ಮಾತನಾಡಿದ ಅಧ್ಯಕ್ಷ ನೇಮಿರಾಜ್ ಅರಿಗ ಅವರು ಮಾತನಾಡಿ ವಿದ್ಯುತ್, ರಸ್ತೆ ಹಾಗೂ ನೀರಾವರಿ ವ್ಯವಸ್ಥೆಗಳು ಒಂದು ತಾಲೂಕಿನ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದು ಅದರಲ್ಲಿ ಮಾಧ್ಯಮದಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಶಾಸಕ ವಿ ಸುನೀಲ್ ಕುಮಾರ್ ಮಾತನಾಡಿ ಕೊರೋನ ಮುಕ್ತ ತಾಲೂಕ್ಕಾಗಿ ಪರಿವರ್ತಿಸಲು ಮೂರು ಅಂಶಗಳ ವ್ಯವಸ್ಥೆಯನ್ನು ಗ್ರಾಮೀಣ ಮಟ್ಟದಲ್ಲಿ ಅಳವಡಿಸಿ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ ಹಾಗೂ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ, ಕೋವಿಡ್ ಕೇರ್ ಸೆಂಟರ್ ಗಳನ್ನು ನಿರ್ಮಿಸಲಾಗಿದೆ ಎಂದರು.
ಕಾರ್ಕಳ ತಾಲೂಕು ತಹಸಿಲ್ದಾರ್ ಪುರಂದರ ಹೆಗ್ಡೆ ಮಾತನಾಡಿ ವೃತ್ತಿ ಧರ್ಮಪಾಲಿಸಿಕೊಂಡು ಕೊರೋನಾ ನಿಯಂತ್ರಣ ನಿಯಂತ್ರಿಸುವುದು ನಮ್ಮ ಜವಾಬ್ದಾರಿ ಯಾಗಿದೆ ಎಂದರು. ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಣಿರಾಜ್ ಶೆಟ್ಟಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಕೋರೋಣ ನಿಯಂತ್ರಣಕ್ಕಾಗಿ ವರದಿಗಳು ಮೂಲಕ ಎಚ್ಚರಿಸುವ ಕಾರ್ಯ ಹಾಗೂ ಜಾಗೃತಿ ಮೂಡಿಸುವ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿ ಹರಿಪ್ರಸಾದ್ ನಂದಳಿಕೆ ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು. ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಮ್ಮದ್ ಶರೀಫ್ ಸ್ವಾಗತಿಸಿ ಸಂಘದ ಕಾರ್ಯದರ್ಶಿ ಕೃಷ್ಣ ನಾಯಕ್ ಧನ್ಯವಾದ ವಿತ್ತರು.