ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗುಮಾಸ್ತ ರಾಮಚಂದ್ರ ಸೇವಾ ನಿವೃತ್ತಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅವರು ಸೇವೆಯಿಂದ ನಿವೃತ್ತರಾಗಿದ್ದಾರೆ.


ಇವರು ಸುಮಾರು 40 ವರ್ಷಗಳ ಕಾಲ ಬೆಳ್ತಂಗಡಿ, ನಡ, ಮದ್ದಡ್ಕ ದಲ್ಲಿ ಸಲ್ಲಿಸಿದ್ದಾರೆ
ಇವರಿಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಶಾಲು ಹೊದಿಸಿ ಚಿನ್ನದ ಉಂಗುರ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ ಹಾಗೂ ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರುಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ