ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿಯಾಗಿ ಡಾ| ಹೇಮಲತಾ ಹೆಚ್. ಅವರು ಫೆ.10ರಂದು ಕರ್ತವ್ಯವನ್ನು ವಹಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ದಂತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಡಾ| ಹೇಮಲತಾ ಇವರು ಈ ಹಿಂದೆ ರಾಯಚೂರು ಜಿಲ್ಲೆಯ ಸಿಂದನೂರು, ಹಾಸನ ಜಿಲ್ಲೆಯ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವನ್ನು ಪಡೆದುಕೊಂಡಿದ್ದಾರೆ. ಇವರು ನಿವೃತ್ತ ಕಂದಾಯ ನಿರೀಕ್ಷಕ ಹೆಚ್. ಪದ್ಮಕುಮಾರ್ ಮತ್ತು ಶ್ರೀಮತಿ ರತ್ನಾವತಿ ದಂಪತಿಯ ಪುತ್ರಿ