ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ 35ನೇ ವರ್ಷದ ಶ್ರೀ ಗಣೇಶೋತ್ಸವವು ಬಳಂಜ ಶಾರದಾ ಕಲಾಮಂದಿರದಲ್ಲಿ ಆ.31ರಂದು ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಾಗೂ ಇಂಟರ್ ಲಾಕ್ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಹೈಕೋರ್ಟ್ ನ್ಯಾಯಾವಾದಿ ಪ್ರಜ್ವಲ್ ಕುಮಾರ್ ಧಾರ್ಮಿಕ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಖ್ಯಾತ ಮೂತ್ರ ರೋಗ ತಜ್ಞ ಡಾ| ಸದಾನಂದ ಪೂಜಾರಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಎಸ್ ಕೆ ಡಿ ಆರ್ ಡಿಪಿ ಯೋಜನಾಧಿಕಾರಿ ಯಶವಂತ ಎಸ್, ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಪ್ರಸಾದ್ ಬಿ.ಎಸ್, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.