ಬೆಳ್ತಂಗಡಿ: ಕಿಡಿಗೇಡಿಗಳು ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಘಟನೆ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ.
ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ನ ಹರಿದಿದ್ದಾರೆ.ಕಳೆದ ಬುಧವಾರ ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಬ್ಯಾನರ್ ಅಳವಡಿಸಲಾಗಿತ್ತು. ಆದ್ರೆ ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ್ದಾರೆ. ಈ ಕೃತ್ಯ ಎಸಗಿದವರು ತಪೊಪ್ಪಿಕೊಳ್ಳದಿದ್ದರೆ ದೈವದ ಮೊರೆ ಹೋಗೋದಾಗಿ ಯಕ್ಷಗಾನ ಆಯೋಜಕರು ತಿಳಿಸಿದ್ದಾರೆ.