ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಸಚಿವ ಸುರೇಶ್ ಕುಮಾರ್ ಭೇಟಿ
ಬೆಳ್ತಂಗಡಿ: ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ದಂಪತಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಭೇಟಿ ನೀಡಿ ತಾಳೆಗರಿ ಸಂರಕ್ಷಣಾ ವಿಧಾನದ ಕುರಿತು ಮಾಹಿತಿ ಪಡೆದರು.
ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್ ಅವರು ಸುರೇಶ್ ಕುಮಾರ್ ಹಾಗೂ ಅವರ ಪತ್ನಿ ಸಾವಿತ್ರಿ ಸುರೇಶ್ ಕುಮಾರ್ ಅವರಿಗೆ ಹಸ್ತಪ್ರತಿ ಸಂಗ್ರಹ- ಸಂರಕ್ಷಣೆ- ಸಂಪಾದನೆ ಇತ್ಯಾದಿ ವಿಷಯಗಳ ಮಾಹಿತಿ ನೀಡಿದರು.
ದೇವಳ ಕಚೇರಿಯ ದೀಕ್ಷಿತ್, ಪ್ರತಿಷ್ಠಾನದ ಸಹಾಯಕ ಸಂಶೋಧಕ ಪವನ್ ಕುಮಾರ್, ಮಂಜುಳಾ, ಮಮತಾ ಉಪಸ್ಥಿತರಿದ್ದರು.