ರಾಜ್ಯ ವಾರ್ತೆ

ಮೇ.19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ 2022 ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವನ್ನು ಮೇ.19 ರಂದು ಪ್ರಕಟಿಸಲಿದೆ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಎಸ್.ಎಸ್ ಎಲ್.ಸಿ ಫಲಿತಾಂಶ ಮೇ. ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದೀಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಮೇ.19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಲಿದೆ.

ಮೇ.19 ರಂದು ಬೆಳಿಗ್ಗೆ 10.30 ರ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ನಿಮ್ಮದೊಂದು ಉತ್ತರ