ಬೆಂಗಳೂರು: ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವರೆಗೆ ಶಾಲೆಗಳಿಗೆ ದಸರಾ ರಜೆ ನೀಡಲಾಗುತ್ತಿದೆ.
ರಂದು ಗಾಂಧಿ ಜಯಂತಿ ಆಚರಣೆಯ ಷರತ್ತಿನ ಮೇರೆಗೆ ರಜೆ ಮಂಜೂರು ಮಾಡಲು ದಕ್ಷಿಣ ಕನ್ನಡ ಡಿಸಿಗೆ ಸೂಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿ.ಸಿ. ನಾಗೇಶ್ ನಿರ್ದೇಶನ ನೀಡಿದ್ದಾರೆ.
ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಮಂಜೂರು ಮಾಡುವಂತೆ ಶಿಕ್ಷಣ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಮಾಡಲಾಗಿದೆ.