ತಾಲೂಕು ಸುದ್ದಿ

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ

filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;

ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಆ.20 ರಂದು ಬೆಳ್ತಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಸಚಿವ ಜಮೀರ್ ರವರು ರಾಜ್ಯದಲ್ಲಿ ಆಗುವ ಅನಾಹುತಗಳಿಗೆ ರಾಜ್ಯಪಾಲರೇ ಜವಾಬ್ದಾರಿ ಎನ್ನುತ್ತಾರೆ. ಎಂಎಲ್‌ಸಿ ಐವನ್ ಡಿಸೋಜ ಅವರು ಬಾಂಗ್ಲಾ ಮಾದರಿ ದಾಳಿ ಮಾಡಬೇಕಾಗುತ್ತದೆ ಎನ್ನುತ್ತಾರೆ. ಇದರರ್ಥ ಏನು? ರಕ್ಷಿತ್ ಶಿವರಾಮ್ ರವರು ಪ್ರಧಾನಿ ನರೇಂದ್ರ ಮೋದಿಯವರು ಹಾಸಿಗೆ ದಿಂಬು ಕಟ್ಟಿಕೊಂಡು ಓಡಬೇಕಾಗುತ್ತದೆ ಎನ್ನುತ್ತಾರೆ. ರಾಜ್ಯಪಾಲರ ತೀರ್ಮಾನ ಸರಿಯೇ ತಪ್ಪೇ ಎಂದು ಪ್ರಶ್ನಿಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಪ್ರಶ್ನಿಸಲು ಅವಕಾಶವಿದೆ. ನ್ಯಾಯಾಲಯಕ್ಕೆ ಹೋದಾಗ ಅಲ್ಲಿ ಆ.29ರವರೆಗೆ ಅಂದರೆ 10 ದಿನ ತಡೆಯಾಜ್ಞೆ ನೀಡಿದ್ದಾರೆ. ಹಾಗಿದ್ದರೆ ಈ ದೂರುದಾರರು ನ್ಯಾಯಾಧೀಶರ ಮೇಲೆ ಸ್ಟೈಕ್ ಮಾಡಿದರೆ ಹೇಗಿದ್ದೀತು? ಒಂದು ವೇಳೆ ನ್ಯಾಯಾಧೀಶರು ಸಿದ್ದರಾಮಯ್ಯನವರ ವಿರುದ್ಧ ತೀರ್ಪು ಕೊಟ್ಟರೆ ನ್ಯಾಯಾಧೀಶರ ವಿರುದ್ಧ ಇವರು ದಂಗೆ ಏಳಿಸ್ತಾರಾ? ಅವರ ಪ್ರತಿಕೃತಿ ದಹನ ಮಾಡುವರೇ? ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರಾ? ಎಂದು ಪ್ರಶ್ನಿಸಿದರು.

ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. ಸಂವಿಧಾನದತ್ತ ಅಧಿಕಾರ ಬಳಸಿ ಅವರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನಿಖೆಯನ್ನೇ ಯಾಕೆ ವಿರೋಧಿಸುತ್ತಿದೆ? ರಾಜ್ಯಪಾಲರು ಸಿದ್ದರಾಮಯ್ಯನವರು ಅಪರಾಧಿ ಎಂದು ಹೇಳಿಲ್ಲ ಎಂದರು.

ಪ್ರತಿಭಟನೆ ವೇಳೆ ಕಲ್ಲು ತೂರಾಟ ಮಾಡಿದ್ದಾರೆ. ಟೈರ್‌ಗಳನ್ನೂ ಸುಟ್ಟಿದ್ದಾರೆ. ಇವರು ಕರ್ನಾಟಕವನ್ನು ಏನು ಮಾಡಲು ಹೊರಟಿದ್ದಾರೆ? ಈ ದೇಶದಲ್ಲಿ ಎರಡು ಬಾರಿ ಸಿಎಂ ಆದ, 40ವರ್ಷಗಳ ರಾಜಕೀಯ ಜೀವನದ ಅಗಾಧ ಅನುಭವವುಳ್ಳ ಸಿದ್ದರಾಮಯ್ಯನವರು ಸೇರಿ ಯಾರು ಕೂಡ ಸಂವಿಧಾನಕ್ಕಿಂತ ಮೇಲಲ್ಲ. ಸಿದ್ದರಾಮಯ್ಯನವರು ಸಂವಿಧಾನಕ್ಕಿಂತ ಮೇಲೂ ಎಂದು ತಿಳಿದುಕೊಳ್ಳುವುದು ಅವರ ಅಹಂಕಾರವನ್ನು ತೋರಿಸುತ್ತದೆ ಎಂದು ವಿಶ್ಲೇಷಿಸಿದರು.

ಐವಾನ್ ಡಿಸೋಜ ಸೇರಿದಂತೆ ಯಾರ್ಯಾರು ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದರೋ, ಯಾರ್ಯಾರು ದಾಳಿ ಮಾಡುವುದಾಗಿ ಬೆದರಿಸಿದ್ದಾರೋ, ಭಯೋತ್ಪಾದಕರ ಥರ ಮಾತನಾಡಿದ್ದಾರೋ ಅವರ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಎಷ್ಟೋ ಪ್ರಕರಣಗಳಲ್ಲಿ ದೂರುದಾರರೇ ಇಲ್ಲದೆ, ನೀವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದೀರಿ. ಆದರೆ, ಇಲ್ಲಿ ಇನ್ನೂ ಯಾಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಲ್ಲ. ಕೂಡಲೇ ಪ್ರಕರಣ ದಾಖಲಿಸಿ ಎಂದು ಒತ್ತಾಯಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ