ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಜಾಗೃತಿ ಅರಿವು ಸಪ್ತಾಹ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ವನ್ಯಜೀವಿ ಇಲಾಖೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವು ನ.2 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕಲಾ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನಾಗೇಶ ಮೂರ್ತಿ ಬಿ.ಕೆ ರವರು ಉದ್ಘಾಟಿಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಶಿಯಸ್ ಎಸ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಸತೀಶ ಕೆ.ಜಿ ಪ್ರತಿಜ್ಞಾ ವಿಧಿ ಭೋಧಿಸಿದರು. ಬೆಳ್ತಂಗಡಿ ಹಿರಿಯ ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಶ್ರೀ ಕೃಷ್ಣ ಶೆಣೈ, ಬೆಳ್ತಂಗಡಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕಿರಣ್ ಕುಮಾರ್ ಬಿ.ಕೆ, ದಿವ್ಯರಾಜ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಭೆಷನರಿ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್, ಬೆಳ್ತಂಗಡಿ ವಲಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಿವಕುಮಾರ್, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಪವನ್ ನಾಯ್ಕ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕಿ ಸೌಮ್ಯ , ವೇಣೂರು ಪೊಲೀಸ್ ಠಾಣೆಯ ಮಹೀಮ್, ತಾ.ಪಂ. ಕಾರ್ಯನಿರ್ವಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಭಾಗವಹಿಸಿದ್ದರು.

ನಿಮ್ಮದೊಂದು ಉತ್ತರ