ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಬಂಟರ ಸಂಘದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ

 

 

 

 

ಬೆಳ್ತಂಗಡಿ: ಉತ್ತಮ ವಿದ್ಯಾಭ್ಯಾಸ ಹಾಗೂ ಸಾಧನೆಗಳನ್ನು ಮಾಡುವ ಮೂಲಕ ವಿಧ್ಯಾರ್ಥಿಗಳು ಸಮಾಜ ಗುರುತಿಸುವಂತಹ ಕೆಲಸವನ್ನು ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದ ಉಪಪ್ರಾದೇಶಿಕ ಮುಖ್ಯಸ್ಥ ಹಾಗೂ ಒಲಿಂಪಿಯನ್ ಅರ್ಜುನ ಪ್ರಶಸ್ತಿ ಪುರಸ್ಕೃತ ಸತೀಶ್ ರೈ ಹೇಳಿದರು.
ಅವರು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ವತಿಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಸಹಕಾರದೊಂದಿಗೆ ನಡೆದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.
ಆತಿಥಿಗಳಾಗಿ ಭಾಗವಹಿಸಿದ ಬೆಳ್ತಂಗಡಿ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ
ರಘರಾಮ ಶೆಟ್ಟಿ ,  ಸಂದರ್ಭದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಉತ್ತಮ ಸಮಾಜ ನಿರ್ಮಾಣದ ಜವಾಬ್ದಾರಿ ವಿದ್ಯಾರ್ಥಿಗಳಿಗಿದೆ ಸಮಾಜದಿಂದ ನಾವೆನು ಪಡದುಕೊಳ್ಳುತ್ತಿದ್ದೇವೆ ಎಂಬುವುದು ಮುಖ್ಯವಲ್ಲ ಸಮಾಜಕ್ಕಾಗಿ ನಾವೇನು ನೀಡಬಹುದು ಎನ್ನುವುದನ್ನು ಅರಿತುಕೊಂಡಿರಬೇಕು ಕೊರೊನಾ ಸಂಕಷ್ಟದಲ್ಲಿ ಹತ್ತು ಹಲವು ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದೇವೆ.ಇದರ ಹೊರತಾಗಿಯೂ ಸಮಾಜದ ಅರ್ಹ ವಿಧ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಬಂಟರ ಸಂಘ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಸತೀಶ್ ರೈ ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಬಂಟರ ಸಂಘದ ಕಾರ್ಯದರ್ಶಿ ರಾಜು ಶೆಟ್ಟಿ ಬೇಂಗೆತ್ಯಾರ್ ಸ್ವಾಗತಿಸಿ. ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಪ್ರಸ್ತಾವನೆಗೈದರು.

ನಿಮ್ಮದೊಂದು ಉತ್ತರ