ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಬೆಳ್ತಂಗಡಿ: ಶಿಕ್ಷಣ ‌ಕ್ಷೇತ್ರದಲ್ಲಿನ‌ ಹಲವು ಸವಾಲುಗಳನ್ನು ‌ಚರ್ಚಿಸುವ ಕುರಿತು ‌ಹಾಗೂ‌ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಲಾದ ‘ಜ್ಞಾನ ತಾಣ’ ಕುರಿತು ಡಾ.ಹೆಗ್ಗಡೆಯವರ ಜೊತೆ ಚರ್ಚೆ ಸಮಾಲೋಚನೆ ‌ನಡೆಸಲಾಯಿತು‌ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಅವರು ತಮ್ಮ ಹುಟ್ಟು ಹಬ್ಬದ ಹಿನ್ನೆಲೆ ‌ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ‌ ಚರ್ಚೆ ನಡೆಸಿದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತವಾಗಿ ಬರೆದಿದ್ದಾರೆ.ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ನಡೆದ ಹಿನ್ನೆಲೆ ‌ಹಾಗೂ‌ ಈ ಬಾರಿ ವಿಶೇಷ ಸನ್ನಿವೇಶದಲ್ಲಿ ಜರುಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯುವುದಕ್ಕಿಂತ ಮುನ್ನ ಧರ್ಮಸ್ಥಳಕ್ಕೆ ಆಗಮಿಸಿ ಭಗವಂತನ ಕೃಪೆ, ಆಶೀರ್ವಾದ ಪಡೆದಿದ್ದೆ. ಪರೀಕ್ಷೆ ಮುಗಿದ ತಕ್ಷಣ ಬಂದು ನನ್ನ ಧನ್ಯವಾದಗಳನ್ನು ಸಮರ್ಪಿಸಿದ್ದೆ ಎಂದು ಧರ್ಮಸ್ಥಳ ಭೇಟಿ ‌ಕುರಿತು‌ ತಿಳಿಸಿದರು.

ನಿಮ್ಮದೊಂದು ಉತ್ತರ