ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ವಾರ್ತೆ

ಬಾಯ೯: ಕಾಂಗ್ರೆಸ್ ಕಾಯ೯ಕತ೯ರ ಪ್ರತಿಭಟನೆ

 

ಬಾರ್ಯ:  ಬಾರ್ಯ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ನಿರ್ದೇಶಕರ, ಅಧ್ಯಕ್ಷ ಉಪಾಧ್ಯಕ್ಷರ ಚುನಾವಣಾ ಪಕ್ರಿಯೆಯಲ್ಲಿ ಸರಕಾರದ ಆದೇಶ ಹಾಗೂ ಕಾನೂನನ್ನು ಗಾಳಿಗೆ ತೂರಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಸಿದ ಚುನಾವಣಾ ಅಧಿಕಾರಿ ಹಾಗೂ ಚುನಾವಣಾ ಪ್ರಕ್ರಿಯೆ ನಡೆಸಿದವರ ವಿರುದ್ದ ಹಾಗೂ ಇಂತಹ ಅಧಿಕಾರಿಯವರನ್ನು ಕರ್ತವ್ಯದಿಂದ ವಜಾಗೊಳಿಸಿ ಶಿಸ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಬ್ರಹತ್ ಪ್ರತಿಭಟನೆ ನ.24 ರಂದು ಬಾರ್ಯ ಸೇವಾ ಸಹಕಾರಿ ಬ್ಯಾಂಕಿನ ವಠಾರದಲ್ಲಿ ಜರುಗಿತು.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಂಜನ್ ಜಿ ಗೌಡ,  ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಕೆ ಶಾಹುಲ್ ಹಮೀದ್, ಬಾರ್ಯ ತಾಲೂಕು ಪಂಚಾಯತ್ ಸದಸ್ಯರಾದ ಸುಜಾತ ರೈ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು,ಪಕ್ಷದ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಮ್ಮದೊಂದು ಉತ್ತರ