ಬೆಳ್ತಂಗಡಿ: ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಅಬಕಾರಿ ಇಲಾಖೆ ಮದ್ಯ ಸಮೇತ ಬಂಧಿಸಿದ ಘಟನೆ ಎ. 22 ರಂದು ವರದಿಯಾಗಿದೆ.
ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ನಿವಾಸಿ ರಾಜೇಶ್ ಎಂಬಾತನು ಅಕ್ರಮವಾಗಿ ಮದ್ಯವನು ಕೊಂಡೊಯ್ಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ,ಅಬಕಾರಿ ಉಪ ಅಧೀಕ್ಷಕರ ನಿರ್ದೇಶನದಲ್ಲಿ ಬೆಳ್ತಂಗಡಿ ಅಬಕಾರಿ ಇಲಾಖೆ ಯವರು ಸ್ಥಳಕ್ಕೆ ತೆರಳಿ ಪರಿಶೀಲನೆ
ನಡೆಸಿ 90 ಮೀ. ಲೀ ಮೈಸೂರ ಮೈಸೂರ್ ಲ್ಯಾನ್ಸರ್ ವಿಸ್ಕಿಯ ಮದ್ಯ ತುಂಬಿದ 96 ಟೆಟ್ರಾ ಪ್ಯಾಕೆಟ್ ಗಳು ಹಾಗೂ 330 ಮೀ. ಲೀ. ಯೂ ಬಿ ಸ್ಟ್ರಾಂಗ್ ಬಿಯರ್ ತುಂಬಿದ 10 ಬಾಟಲ್ ಗಳನ್ನು ವಶಪಡಿಸಿಕೊಂಡು ಆರೋಪಿ ಯನ್ನು ಸ್ಥಳದಲ್ಲಿಯೇ ದಸ್ತಗಿರಿ ಮಾಡಿ, ಪ್ರಕರಣ ದಾಖಲಿಕೊಂಡಿದ್ದಾರೆ.