ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಹಾಗೂ ಏತ ನೀರಾವರಿ ಯೋಜನೆಗಾಗಿ ಸರಕಾರ ರೂ 240 ಕೋಟಿ ಬಿಡುಗಡೆಗೊಳಿಸಿದೆ.
ಇಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸಚಿವ ಬಸವರಾಜ ಬೊಮ್ಮಾಯಿ ಯವರು ಬೆಳ್ತಂಗಡಿ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳ ಅಭಿವೃದ್ಧಿ ಕಾರ್ಯಗಳಿಗೆ ರೂ.240 ಕೋಟಿ ಅನುದಾನವನ್ನು ಘೋಷಿಸಿದ್ದಾರೆ.
ಮೊಗ್ರು ಗ್ರಾಮದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ, ಇಳಂತಿಲ, ಬಂದಾರು,ಕಣಿಯೂರು,ಉರುವಾಲು, ಕಳಿಯ,ನ್ಯಾಯತರ್ಪು, ಓಡಿಲ್ನಾಳ, ಕುವೆಟ್ಟು ಗ್ರಾಮಗಳಲ್ಲಿ ನೀರಾವರಿ ಸೌಲಭ್ಯವನ್ನು ಅಭಿವೃದ್ಧಿಗೊಳಿಸಲು, ಗುರುವಾಯನಕೆರೆ ಅಭಿವೃದ್ಧಿ ಕಾರ್ಯಗಳಿಗೆ ಈ ಅನುದಾನ ಬಳಕೆಯಾಗಲಿದೆ ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.