ತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಕಾರ್ಯಕ್ರಮಗಳು ಪ್ರಾರಂಭಗೊಂಡಿದ್ದು, ಇದರ ಅಂಗವಾಗಿ ಸರ್ವಧರ್ಮ ಸಮ್ಮೇಳನ  ಇಂದು ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.


ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರವರು ಸರ್ವಧರ್ಮ ಸಮ್ಮೇಳನವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬೆಂಗಳೂರು ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ಪ್ರೊ. ರಾಮಚಂದ್ರ ಜಿ. ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ. ಸರ್ಫ್ರಾಜ್ ಚಂದ್ರಗುತ್ತಿ, ಡಾ. ಎಂ.ಎಸ್ ಪದ್ಮ, ವಂದನೀಯ ಫಾದರ್ ವೀರೇಶ್ ವಿ. ಮೋರಾಸ್ ರವರು ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್   ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಣಿಲ ಶ್ರೀ ಧಾಮದ ಮೋಹನದಾಸ ಸ್ವಾಮೀಜಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್ ಹೆಚ್ ಮಂಜುನಾಥ್ , ಯೋಜನಾಧಿಕಾರಿ ಜಯಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ