ತಾಲೂಕು ಸುದ್ದಿ

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸ್ವಂತ ಕಟ್ಟಡ ಹಾಗೂ ಕಾಳುಮೆಣಸು ಗಾರ್ಬ್ಲಿಂಗ್ ಕೇಂದ್ರ ಉದ್ಘಾಟನೆ

ಗುರುವಾಯನಕೆರೆ: ತಾಲೂಕಿನ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ನೂತನವಾಗಿ ನಿರ್ಮಿಸಿರುವ ಸಂಘದ ಸ್ವಂತ ಕಟ್ಟಡ ಹಾಗೂ ಕಾಳುಮೆಣಸು ಗಾರ್ಬ್ಲಿಂಗ್ ಕೇಂದ್ರ ಮಾ.5 ರಂದು ಗುರುವಾಯನಕೆರೆಯಲ್ಲಿ ಉದ್ಘಾಟನೆಗೊಂಡಿತು.
ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಶಾಸಕ ಹರೀಶ್ ಪೂಂಜ ಹಾಗೂ ಕಾಳುಮೆಣಸು ಗಾರ್ಬ್ಲಿಂಗ್ ಕೇಂದ್ರವನ್ನು ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಅಧ್ಯಕ್ಷ ಶ್ರೀಧರ್ ಜಿ ಭಿಡೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಗುರುವಾಯನಕೆರೆ, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಆಶಾಲತ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿವರ್ಗ ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು.
ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಉಪಾಧ್ಯಕ್ಷ ಅನಂತ ಭಟ್ ಎಂ ಸ್ವಾಗತಿಸಿ, ಶಶಿಧರ ಠೋಸರ್ ನಿರೂಪಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಧನ್ಯವಾದಗೈದರು.

ನಿಮ್ಮದೊಂದು ಉತ್ತರ