ಬೆಳ್ತಂಗಡಿ: ಮೇ 16 ರಿಂದ ರಾಜ್ಯದಲ್ಲಿ 1ನೇ ತರಗತಿ ಯಿಂದ 10ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಮೇ 15ರಂದೇ ಶಾಲೆಗಳನ್ನು ಸ್ವಚ್ಛ ಮಾಡಿಸಿ, ಮಕ್ಕಳನ್ನು ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಕರಿಗೆ, ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಇಲಾಖೆ ತಿಳಿಸಿದೆ. ಪ್ರಾರಂಭೋತ್ಸವ ದಿನವೇ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಆರಂಭಿಸಬೇಕು. ಹಾಗಾಗಿ ಶಿಕ್ಷಕರು ಇತರ ಸಿಬ್ಬಂದಿಗಳು ಮೇ 15ರಂದು ಶಾಲಾ ಸ್ವಚ್ಛತೆ, ಸುರಕ್ಷತೆ ಪರಿಶೀಲನೆ, ಪೂರ್ವಭಾವಿ ಸಭೆ, ತರಬೇತಿ, ಸಮಾಲೋಚನಾ ಸಭೆಯೊಂದಿಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಮೇ 16ಕ್ಕೆ ಶಾಲೆ ಪ್ರಾರಂಭೋತ್ಸವ ನಡೆಸಿ ಮಕ್ಕಳನ್ನು ಸ್ವಾಗತಿಸಬೇಕು ಎಂದು ಸೂಚಿಸಲಾಗಿದೆ.